Site icon Suddi Belthangady

ಶ್ರೀ ಧ.ಮಂ.ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಇಂಜಿನಿಯರ್‌ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಇಂಜಿನಿಯರ್‌ ದಿನಾಚರಣೆ ಪ್ರಯುಕ್ತ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ದಿನಾಚರಣೆ ಸಂದರ್ಭದಲ್ಲಿ ಗ್ರಾಮೀಣ ಶಾಲಾ ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡುವ ಸಲುವಾಗಿ ಡಾ.ಗಿರೀಶ್‌ಕುಮಾರ್, ಪ್ರೋ.ಶೈಲೇಶ್ವರಿ ಮತ್ತು ಪ್ರೋ.ಸುಬ್ರಹ್ಮಣ್ಯ ಶರ್ಮ ಒಳಗೊಂಡ ತಂಡವು ಸ್ಥಳೀ೦ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯಗಾರ ನಡೆಸಿದರು.

Exit mobile version