ಬೆಳ್ತಂಗಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಆಯಾಮ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಡ ಶಾಲೆ, ಮೀಯಪದವು ಕಾಸರಗೋಡು ಇವರುಗಳ ಆಶ್ರಯದಲ್ಲಿ ಜರುಗಿದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಗಡಿನಾಡು ಸಾಂಸ್ಕೃತಿಕ ಉತ್ಸವದಲ್ಲಿ ದ.ಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾಗಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ ಸಂಸ್ಕೃತಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ತುಳು ಜನಪದ ವಿದ್ವಾಂಸ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅವರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ ಲಭಿಸಿರುತ್ತದೆ.
ಬೆಳ್ತಂಗಡಿ ವಾಣಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ
