ಬೆಳಾಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬೆಳಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಾಲು ಸಹಕಾರದೊಂದಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳು, ಬೆಳಾಲು ಹಾಗೂ ಊರವರ ಆಶ್ರಯದಲ್ಲಿ ಸೆ.19ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವೈದಿಕ, ಧಾರ್ಮಿಕ, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳೊಂದಿಗೆ ಜರಗಿತು.
ಬೆಳಿಗ್ಗೆ ನಂದಾ ದೀಪ ಬೆಳಗಿಸುವುದುದರ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.ಬಳಿಕ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ದೇವರಿಗೆ ರಜತ ಕಿರೀಟ ಸಮರ್ಪಣೆ ಮಾಡಲಾಯಿತು.
ನಂತರ ಸ್ಥಳೀಯ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ಮಧ್ಯಾಹ್ನ ಮಹಾ ಪೂಜೆ ಜರಗಿತು.ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಬಾರಿತ್ತಾಯ ಪಾರಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳಾಲು ಗ್ರಾ.ಪಂ.ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷ ಗಣೇಶ್ ಗೌಡ ಕನಿಕ್ಕಿಲ, ಕಾರ್ಯದರ್ಶಿ ಹರೀಶ್ ಆಚಾರ್ಯ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಭಟ್ ಚೊಕ್ಕಡಿ, ಬೆಳಾಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಯೋಜನೆಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿಗಳಾದ ಆಶಾ, ಪ್ರಭಾ ದಿನೇಶ್, ತಾರಾನಾಥ್ ಜಿ., ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಕುಮಾರ್, ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷ ಗಣೇಶ್ ಕನಿಕ್ಕಿಲ ರತ್ನಾಕರ ಆಚಾರ್ಯ, ಶೀನಪ್ಪ ಗೌಡ ಮನಿಕ್ಕಳ ಇವರನ್ನು ಸನ್ಮಾನಿಸಲಾಯಿತು.
ಶಿವಕುಮಾರ್ ಬಾರಿತ್ತಾಯ ಸ್ವಾಗತಿಸಿ, ಧರ್ಮೇಂದ್ರ ಕುಮಾರ್ ನಿರೂಪಿಸಿದರು