

ಉಜಿರೆ: ಸೆ.17ರಂದು ಮಂಗಳೂರಿನಲ್ಲಿ ದ.ಕ.ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಸೇವೆಯನ್ನು ಗುರುತಿಸಿ, “ಉತ್ತಮ ಶಿಕ್ಷಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು.

ವಿಧಾನ ಪರಿಷತ್ ಶಾಸಕರಾದ ಎಸ್.ಎಲ್.ಬೋಜೇ ಗೌಡರವರು, ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಣ್ಣ ಸಿ.ಡಿ., ದ.ಕ.ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಎನ್.ಗಂಗಾಧರ ಆಳ್ವ, ಕಾರ್ಯದರ್ಶಿ ಯೂಸುಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಮೋದ್ ಕುಮಾರ್ ರವರು ಕಳೆದ 25 ವರ್ಷಗಳಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪದೋನ್ನತಿ ಹೊಂದಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.