Site icon Suddi Belthangady

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಶಿಶಿಲ: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಶಿಶಿಲ, ಜೇಸಿಐ ಸಂಸ್ಥೆ ನೆಲ್ಯಾಡಿ ಇವುಗಳ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ, ಸಂಚಾರಿ ನೇತ್ರಾ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಸೆ.22ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಶಿಬಿರದ ಉದ್ಘಾಟನೆಯನ್ನು ಶಿಶಿಲ ಗ್ರಾ.ಪಂ.ಅಧ್ಯಕ್ಷ ಸುಧಿನ್ ನೆರವೇರಿಸಿದರು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ನ ಅಧ್ಯಕ್ಷೆ ಡಾ| ಗೌರಿ ಪೈ, ಶ್ರೀ ಕ್ಷೇ.ಧ.ಗ್ರಾ.ಯೋ ಅರಸಿನಮಕ್ಕಿ ವಲಯದ ಮೇಲ್ವಿಚಾರಕಿ ಶಶಿಕಲಾ, ಅರಸಿನಮಕ್ಕಿ ಶ್ರೀ ದುರ್ಗಾ ಕ್ಲಿನಿಕ್ ನ ವೈದ್ಯೆ ಹರ್ಷಿತಾ ಸುವಿನ್, ವಿಶ್ವಾಸ್ ಶೆಣೈ ಡಿಸ್ಟಿಕ್ ಚೆಯರ್ ಮೆನ್ ಪಬ್ಲಿಕ್ ಇಮೇಜ್‌ರೋಟರಿ ಜಿಲ್ಲೆ, ನೆಲ್ಯಾಡಿ ಜೇಸಿಐ ಅಧ್ಯಕ್ಷ ಮತ್ತು ನೆಲ್ಯಾಡಿ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತು, ಶಿಶಿಲ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ್.ಕೆ.ಪಿ, ಶಿಶಿಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ನಿಂಗಣ್ಣ ಗೌಡರ್ ಉಪಸ್ಥಿತರಿದ್ದರು.

ಮಂಗಳೂರು ನೇತ್ರ ಪರಿವೀಕ್ಷಕರಾದ ಡಾ| ಶಾಂತರಾಜ್ ಶಿಬಿರದ ಮಾಹಿತಿ ಮತ್ತು ಕಣ್ಣಿನ ಬಗ್ಗೆ ಮಾಹಿತಿ ನೀಡಿದರು.
ಡಾ| ಸೃಷ್ಟಿ, ಡಾ| ರಿಯಾ, ಸರ್ಜನ್ ಕಣ್ಣಿನ ತಪಾಸಣೆ ನಡೆಸಿದರು.

49ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು ಧನ್ಯವಾದವಿತ್ತರು.

170 ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

Exit mobile version