Site icon Suddi Belthangady

ಬೆಳ್ತಂಗಡಿ: ಜನ ಜಾಗೃತಿ ವೇದಿಕೆ ಟ್ರಸ್ಟ್ ಕಛೇರಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಬೆಳ್ತಂಗಡಿ: ಅಕ್ಟೋಬರ್ 2 ಮಹಾತ್ಮ ಗಾಂಧೀಜಿಯವರ ಜನ್ಮದಿನ. ಪ್ರತಿಯೊಬ್ಬರು ದುಶ್ಚಟವೆಂಬ ಅನಿಷ್ಟ ಅಭ್ಯಾಸಕ್ಕೆ ಬಲಿಬೀಳದೆ ಸಮೃದ್ಧ ಭಾರತವನ್ನು ಕಟ್ಟಬೇಕೆಂದವರು ಗಾಂಧೀಜಿಯವರು.

ಇವರ ಈ ಕಲ್ಪನೆಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮ ಸ್ವರಾಜ್ಯದ ಕನಸಿನೊಂದಿಗೆ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವ ಯೋಜನೆಗೆ ಹಾಗೂ ಸಮೃದ್ಧ ಕುಟುಂಬಗಳ ಶ್ರೇಯಸ್ಸಿಗಾಗಿ ಶ್ರಮಿಸುತ್ತಿರುವವರು ಪೂಜ್ಯ ಡಾ| ಡಿ.ವೀರೇಂದ್ರ ಹೆಗ್ಗಡೆಯವರು. ಈ ಬಾರಿ ಅಕ್ಟೋಬರ್ 2ರ ಕಾರ್ಯಕ್ರಮವನ್ನು ಅಕ್ಟೋಬರ್ 2ರಿಂದ 15ರವರೆಗೆ ರಾಜ್ಯಾದ್ಯಂತ ಆಯೋಜಿಸಲಾಗಿದೆ.

ಈ ಬಾರಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಕಾರ್ಯಕ್ರಮವನ್ನು ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಹರೀಶ್ ಪೂಂಜ, ಶಾಸಕರ ಅಧ್ಯಕ್ಷತೆಯಲ್ಲಿ ಗಾಂಧಿ ಸ್ಮತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಕಾರ್ಯಕ್ರಮವನ್ನು ಅಕ್ಟೋಬರ್ 2ರಂದು ಹಮ್ಮಿಕೊಳ್ಳಲಾಗಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಇಂದು ಜನಜಾಗೃತಿ ವೇದಿಕೆ ಟ್ರಸ್ಟ್ ಕಛೇರಿಯಲ್ಲಿ ನಡೆಸಲಾದ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.ಸಭೆಯಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಸ್, ದ.ಕ.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಯೋಜನಾಧಿಕಾರಿಗಳಾದ ಸುರೇಂದ್ರ, ದಯಾನಂದ ಪೂಜಾರಿ, ಮೋಹನ್, ಜೈವಂತ್ ಪಟಗಾರ್, ಮೇಲ್ವಿಚಾರಕರು ಹಾಗೂ ನವಜೀವನ ಪೋಷಕರು ಉಪಸ್ಥಿತರಿದ್ದರು.

Exit mobile version