ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಕಾರ್ಯಾಗಾರ, ಗ್ರಾಮ ಅರೋಗ್ಯ ಅಭಿಯಾನ ದಡಿ ಉಚಿತ ಅರೋಗ್ಯ ತಪಾಸನಾ ಶಿಬಿರ ಮತ್ತು ತೋಟಗಾರಿಕೆ ಇಲಾಖೆ , ಕೃಷಿ ಇಲಾಖೆ,, ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಇದರ ಸಹ ಭಗೀತ್ವದಲ್ಲಿ ಜೇನು ಕೃಷಿ, ಇಲಾಖೆಯ ವಿವಿಧ ಯೋಜನೆಗಳು, ಬೆಳೆ ವಿಮೆ ಮತ್ತು ಪೌಷ್ಟಿಕ ತೋಟದ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ ಸೆ.26 ರಂದು ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಎ.ಕೆ.ಕಾರ್ಯಕ್ರಮವನ್ನು ಉದ್ಘಾಟಿಸಿದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್.ಚಂದ್ರಶೇಖರ್, ಸಹಕಾರ ಅಭಿವೃದ್ಧಿ ಪ್ರತಿಮಾ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಜೇನು ಕೃಷಿ ತರಬೇತಿದಾರ ರಾಧಾಕೃಷ್ಣ ಕೋಡಿ, ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಗ್ರಾಮ ಪಂಚಾಯತ್ ಸದಸ್ಯರು,ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛತೆ ಆಂದೋಲನದ ಕುರಿತು ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ನಾಗರೀಕರು, ವರ್ತಕರು ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸ್ವಚ್ಛತೆ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಲಾಯಿತು.ಆರೋಗ್ಯ ತಪಾಸಣೆ, ವಿವಿಧ ಕೃಷಿ, ತೋಟಗಾರಿಕೆ, ಇಲಾಖೆಯ ಮಾಹಿತಿಯನ್ನು ನೀಡಿದರು.ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ನಿರೂಪಿಸಿದರು.