Site icon Suddi Belthangady

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ ವಿಮಲಾ ಚಾಲನೆ ನೀಡಿದರು.

ಅಭಿಯಾನದ ಮಾದರಿಯಲ್ಲಿ ಸಮುದಾಯಕ್ಕೆ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ತಲುಪುವ ಬಗ್ಗೆ ಈ ಸೇವೆಯನ್ನು ಮಾಡಲಾಗಿದೆ.ಧರ್ಮಸ್ಥಳ ಗ್ರಾಮದ ಎಲ್ಲಾ ವಾರ್ಡ್ ಗಳಲ್ಲಿ ಎಲ್ಲಾ ಕುಟುಂಬಗಳಿಗೆ, ಅಂಗನವಾಡಿ, ಶಾಲೆ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.ಅದರ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ.ಗ್ರಾಮದ ಅರೋಗ್ಯ ಸೇವೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವಂತಹ ವೈದ್ಯರು ಸಿಬ್ಬಂದಿ ವರ್ಗ ಅವರಿಗೆ ಪಂಚಾಯತಿ ಉಪಾಧ್ಯಕ್ಷರಾದ ಪಿ.ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಅಧ್ಯಕ್ಷೆ, ಹಾಲಿ ಸದಸ್ಯೆ ಜಯ ಮೋನಪ್ಪಗೌಡ, ಸದಸ್ಯರಾದ ರಾಮಚಂದ್ರ ರಾವ್, ವಸಂತ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕಿ ಪ್ರಮೀಳಾ, ಕನ್ಯಾಡಿ ಆರೋಗ್ಯ ಉಪಕೇಂದ್ರದ ಆರೋಗ್ಯ ಪರಿವೀಕ್ಷಕರಾದ ಆನ್ಸಿ ಮೇರಿ, ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಅಧಿಕಾರಿ ಡಾ.ಮಂಜು, ಹಿರಿಯ ಅರೋಗ್ಯ ಸಹಾಯಕಿ ಸೀತಮ್ಮ, ಸಾಕೇತ ಮ್ಯಾನೇಜರ್ ಶ್ರೀಧರ ಶೆಟ್ಟಿ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version