ರಾಜ್ಯ ಮಲೆಕುಡಿಯ ಸಂಘದ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇಲ್ಲಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

0

ಬೆಳ್ತಂಗಡಿ: ಸೆ.25ರಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಮಲೆಕುಡಿಯ ಸಂಘ ಹಾಗೂ ವಿವಿಧ ಜಿಲ್ಲೆಗಳ ಜಿಲ್ಲಾ ಸಂಘಗಳ ಪದಾಧಿಕಾರಿಗಳೊಂದಿಗೆ ಕರ್ನಾಟಕ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕಲ್ಲೇಶ್‌ರವರನ್ನು ಭೇಟಿಯಾಗಿ ಮಲೆಕುಡಿಯ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

ಅಂತರ್ ರಾಜ್ಯ ಜಾತಿ ಪ್ರಮಾಣ ಪತ್ರದ ಸಮಸ್ಯೆ, ಜಾತಿ ಪ್ರಮಾಣ ಪತ್ರದಲ್ಲಿರುವ ಜಾತಿ ಹೆಸರಿನ ಗೊಂದಲ, ಅರಣ್ಯ ಹಕ್ಕು ಕಾಯ್ದೆ, ಪುನರ್ವಸತಿ ಯೋಜನೆ, ಪೌಷ್ಟಿಕ ಆಹಾರ ಸರಬರಾಜು, ಉದ್ಯೋಗದಲ್ಲಿ ನಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ, ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಪ್ರತಿ ಮೂರು ತಿಂಗಳಿಗೊಮ್ಮೆ ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೊಳಲಿ, ಮಲೆಕುಡಿಯರ ಸಂಘ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷರಾದ ಹರೀಶ್ ಎಳನೀರು, ಸೌತಡ್ಕ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಠಲ್ ಕೊಕ್ಕಡ, ಲೋಹಿತ್ ಕಲ್ಮಂಜ, ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಅಧ್ಯಕ್ಷರಾದ ಗಂಗಾಧರ್ ಈದು, ದಿನೇಶ್ ನೂರಾಲ್ ಬೆಟ್ಟು, ಸುಂದರ್ ಗೌಡ ರೇಂಜಾಲ ಮೊದಲಾದವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here