Site icon Suddi Belthangady

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

ಧರ್ಮಸ್ಥಳ: ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ ನಿರಂತರ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತ್ ನ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಿರ್ಮಿಸಿರುವ ತೋಟಗಳಿಗೆ ಹಾಕಲು ಹಾಗೂ ಬೆಳೆಸಲು ಧರ್ಮಸ್ಥಳ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಘಟಕದಲ್ಲಿ ತಯಾರಾಗಿರುವ ಸಮೃದ್ಧಿ ಸಾವಯವ ಗೊಬ್ಬರವನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version