ಉಜಿರೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

0

ಉಜಿರೆ: ದ.ಕ.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಶಿಕ್ಷಣ ಇಲಾಖೆ, ಎಸ್.ಡಿ.ಎಂ ಎಜುಕೇಷನಲ್ ಟ್ರಸ್ಟ್ ಉಜಿರೆ, ತಾಲೂಕು ಯುವಜನ ಒಕ್ಕೂಟ, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 2023 ನೇ ಸಾಲಿನ ದಸರಾ ಕ್ರೀಡಾಕೂಟ ಸೆ.28 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಉದ್ಘಾಟಿಸಿ ಶುಭ ಹಾರೈಸಿದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಸುಜಯ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಬಿ., ಎಸ್.ಡಿ.ಎಂ ಕ್ರೀಡಾ ಕಾರ್ಯದರ್ಶಿ ರಮೇಶ್ ರವಿ ವೈ.ನಾಯಕ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್, ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ಚಿದಾನಂದ ಇಡ್ಯಾ, ತಾಲೂಕು ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಸಂಚಾಲಕರು ನಾಮದೇವ್ ರಾವ್ ನಿರೂಪಿಸಿ, ಸಂಚಾಲಕ ಸಾಂತಪ್ಪ ಸ್ವಾಗತಿಸಿ, ಯಂಗ್ ಚಾಲೆಂಜರ್ಸ್ ಮುಂಡಾಜೆ ಇದರ ಅಧ್ಯಕ್ಷರಾದ ಶಿನಪ್ಪ ಗೌಡ ವಂದಿಸಿದರು.

LEAVE A REPLY

Please enter your comment!
Please enter your name here