ಉಜಿರೆ: ಶಿಕ್ಷಕರ ದಿನಾಚರಣೆಯ ನೃತ್ಯ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜಿನ ಉಪನ್ಯಾಸಕರ ತಂಡ ಪ್ರಥಮ ಸ್ಥಾನ

0

ಉಜಿರೆ: ಮಂಗಳೂರಿನಲ್ಲಿ ದ.ಕ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ವತಿಯಿಂದ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು, ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ವಿಜೇತ ತಂಡಕ್ಕೆ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಪ್ರಶಸ್ತಿ ನೀಡಿ ಗೌರವಿಸಿದರು.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ., ದ.ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ. ಎನ್ ಗಂಗಾಧರ್ ಆಳ್ವ, ಕಾರ್ಯದರ್ಶಿ ಯೂಸೂಫ್ ವಿಟ್ಲ, ಉಪಾಧ್ಯಕ್ಷ ವಿಠಲ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here