ವೇಣೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಯಲು ಹಾಗೂ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು, ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಲು ಬೇಕಾದ ಆತ್ಮವಿಶ್ವಾಸವನ್ನು ಎನ್.ಎಸ್.ಎಸ್. ನೀಡುತ್ತದೆ ಎಂದು ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಷ್ ಪೂಜಾರಿ ವೇಣೂರು ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಎನ್.ಎಸ್.ಎಸ್. ಅನುಭವಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿ ಮನ್ಸೂರ್, ಸೌದಿ ಅರೇಬಿಯಾದಲ್ಲಿ ನಡೆದ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ ಇವರು ಎನ್.ಎಸ್.ಎಸ್ ಶಿಬಿರಿದಲ್ಲಿ ಗಳಿಸಿದ ಅಪಾರ ಅನುಭವನ್ನು ವಿಧ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಿತೈಷಿ ಜೀವಾವಿಮಾ ನಿಗಮದ ಪ್ರತಿನಿಧಿ ಜಗನಾಥ್ ಎಚ್., ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಉಪಸ್ಥಿತರಿದ್ದರು.
ಕಿರಿಯ ತರಬೇತಿ ಅಧಿಕಾರಿ ಸತೀಶ್ ಸ್ವಾಗತಿಸಿ, ಎನ್.ಎಸ್.ಎಸ್. ಸ್ವಯಂ ಸೇವಕ ಪ್ರಶಾಂತ್ ಪ್ರಾರ್ಥಿಸಿ, ರಶ್ಮಿ ವಂದಿಸಿ, ಅಂಕಿತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಯಿತು.