Site icon Suddi Belthangady

ಪುಂಜಾಲಕಟ್ಟೆ ಸ.ಪ್ರ.ದ.ಕಾಲೇಜಿನಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುಂಜಾಲಕಟ್ಟೆ: ಸೆ.27ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 ಇದರ ವತಿಯಿಂದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ “ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಮತ್ತು ಇಂಜಿನಿಯರಿಂಗ್ ನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಪದ್ಮನಾಭ ಬಿ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಕಲಿಕೆ ಹಾಗೂ ಕೌಶಲಗಳ ಸಮ್ಮಿಲನದಿಂದ ಜೀವನ ಸುಗಮ, ರಾ.ಸೇ.ಯೋ.ಯ ಉದ್ದೇಶ ಮತ್ತು ಮೌಲ್ಯಗಳು, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲಗಳನ್ನು ವೃದ್ಧಿಸುತ್ತದೆ.ಸಮಾಜ, ಜನ- ಜೀವನದೊಡನೆ ಒಡನಾಡುವ ಅವಕಾಶಗಳನ್ನು ಕೊಡುವ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉದ್ದೇಶಗಳನ್ನು ಸ್ವಯಂಸೇವಕರು ಅರ್ಥೈಸಿಕೊಂಡು ಬದುಕನ್ನು ಪರಿಪೂರ್ಣ ವಾಗಿಸಲು ಪ್ರಯತ್ನಿಸಬೇಕೆಂದು ಹೇಳಿದರು.ಇದರ ಜೊತೆಗೆ 2022-23 ರನೇ ಸಾಲಿನ ರಾ. ಸೇ. ಯೋ. ಯ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಿದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಕೆ ಶರತ್ ಕುಮಾರ್ ಇವರು ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವ ಹಾಗೂ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಯೋಜನೆಯಾಗಿದೆ ಎಂದು ಅಭಿಪ್ರಾಯಪಟ್ಟರು .

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ.ಅವಿತ ಮರಿಯ ಕ್ವಾಡ್ರಸ್, ರಾ.ಸೇ.ಯೋ.ಯ ಸಲಹಾ ಸಮಿತಿಯ ಸದಸ್ಯರಾದ ಡಾ.ವೈಶಾಲಿ ಯು ಹಾಗೂ ಪ್ರೊ.ಮಾಧವ ಇವರು ಉಪಸ್ಥಿತರಿದ್ದರು.

ಯೋಜನಾಧಿಕಾರಿಯಾದ ಪ್ರೊ.ಸಂತೋಷ್ ಪ್ರಭು ಎಂ ಪ್ರಾಸ್ತವಿಕ ನುಡಿಯ ಜೊತೆಗೆ ಅತಿಥಿಗಳನ್ನು ಸ್ವಾಗತಿಸಿದರು.ಯೋಜನಾಧಿಕಾರಿಯಾದ ಪ್ರೊ.ಚಿತ್ರಾ ಪಡಿಯಾರ್ ಹಾಗೂ ಬೋಧಕ-ಬೋಧಕೇತರ ವೃಂದದವರು, ರಾ.ಸೇ.ಯೋ.ಯ ಸ್ವಯಂಸೇವಕರು ಉಪಸ್ಥಿತರಿದ್ದರು.

ರಾ.ಸೇ.ಯೋ.ಯ ಪದಾಧಿಕಾರಿಯಾದ ಕು.ಅಕ್ಷಯ್ ಇವರು ಸಂಪನ್ಮೂಲ ವ್ಯಕ್ತಿಯ ಕಿರುಪರಿಚಯ ಮಾಡಿದರು.ಕು.ದೀನಕೃಪಾ ಇವರು ಕಾರ್ಯಕ್ರಮ ನಿರೂಪಿಸಿ, ಕು.ಪ್ರಜ್ಞಾ ಧನ್ಯವಾದವಿತ್ತರು.

Exit mobile version