ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದಲ್ಲಿ ಸೃಜನಶೀಲ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಉದ್ಯೋಗವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿರುವ 10 ಕುಟುಂಬವನ್ನು ಆಯ್ಕೆ ಮಾಡಿಕೊಂಡು ಪ್ರತಿಯೊಂದು ಕುಟುಂಬಕ್ಕೆ 25 ಮಲ್ಲಿಗೆ ಗಿಡವನ್ನು ಉಚಿತವಾಗಿ ನೀಡಲಾಗಿದೆ, ಮಲ್ಲಿಗೆ ಕೃಷಿಯಿಂದ ಹಲವಾರು ಮಂದಿ ಜೀವನ ನಡೆಸುತ್ತಿದ್ದು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ನಾಟಿ ಮತ್ತು ನಿರ್ವಹಣೆ ಬಗ್ಗೆ ಕೃಷಿಕರಾದ ಲಿಂಗಪ್ಪಗೌಡ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಯಾಳರವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುಶಾಂತ್ ರವರು, ಜ್ಞಾನವಿಕಾಸ ಸಮನ್ವಯಧಿಕಾರಿಯಾದ ಮಧುರಾರವರು, ಸೇವಾಪ್ರತಿನಿಧಿ ಗೀತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು, ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here