Site icon Suddi Belthangady

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ ಕಾರ್ಯಕ್ರಮ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ 2022-23 ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ಸೆ.30 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಜಮಾಬಂದಿ ನೋಡೆಲ್ ಅಧಿಕಾರಿಯಾಗಿ ದ.ಕ.ಜಿ.ಪ.ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ, ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು, ತಾಲೂಕು ಪಂಚಾಯತ್ ಲೆಕ್ಕ ಸಹಾಯಕ ಗಣೇಶ್ ಪೂಜಾರಿ ಸ್ವಾಗತಿಸಿದರು.ಮೆನೇಜರ್ ಪ್ರಶಾಂತ್ ಡಿ., ಅಶೋಕ ದೇವಾಡಿಗ ಸಿಬ್ಬಂದಿಗಳು ಸಹಕರಿಸಿದರು.

Exit mobile version