ಇಂದಬೆಟ್ಟು: ಮಹಾತ್ಮ ಗಾಂಧೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಭಾರತ ಸರಕಾರದ ನಿರ್ದೇಶನದಂತೆ ಸ್ವಚ್ಚತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮವು ಅ.1ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾಲತಾ ರವರ ನೇತೃತ್ವದಲ್ಲಿ ಆರಂಭಗೊಂಡು ಇಂದಬೆಟ್ಟು ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗದವರು, ಗ್ರಾಮದ ಯುವ ಸಂಘಟನೆ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಇಂದಬೆಟ್ಟು ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಇಂದಬೆಟ್ಟು ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ನೋಡೆಲ್ ಅಧಿಕಾರಿ ತಾರಕೇಶ್ವರಿ ಯವರು, ಸಿ.ಆರ್.ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಸ್ವಾಗತಿಸಿ ಪ್ರತಿಜ್ಞೆ ಭೋದಿಸಿದರು.ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.