ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.02ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡಿತು.ಶಾಲಾ ಸಹ ಶಿಕ್ಷಕಿಯಾದ ಜ್ಯೋತಿ ಫೆರ್ನಾಂಡಿಸ್ ರವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಮಹತ್ವವನ್ನು ವಿವರಿಸಿದ್ದರು.

ನಂತರ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ  ಡೇಸರವರು, ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.ನಂತರ ಮುಖ್ಯೋಪಾಧ್ಯಾಯರು, ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಶ್ವೇತಾರವರು ಸ್ವಾಗತಿಸಿ, ಪ್ರಿನ್ಸಿಯ ಮಸ್ಕರೇನಸ್ ರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here