

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಾಂಧೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಪ್ರಯುಕ್ತ ಶಾಲೆಯ ಆವರಣ ಹಾಗೂ ಶಾಲೆಯ ವಠಾರವನ್ನು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ನಂತರ ನಡೆದಂತಹ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶೀನಪ್ಪ ಗೌಡರವರು ಗಾಂಧೀಜಿ ಅವರ ತತ್ವ ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.