


ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ ಪ್ರತಿಷ್ಠಿತ `ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿಗೆ ಆಯ್ಕೆಯಾಗಿತ್ತು.


ಅ.2 ಗಾಂಧಿ ಜಯಂತಿಯಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಯವರಿಂದ ಬಳಂಜ ಗ್ರಾಮ ಪಂಚಾಯತ್ ದ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ರೂ.5 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ.








