ಮುಂಡಾಜೆ: ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಮುಂಡಾಜೆ: ಮುಂಡಾಜೆ ಪದವಿಪೂರ್ವ ವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ ಯವರು ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರು ಅತ್ಯಂತ ಸರಳತೆಯಿಂದ ಜೀವಿಸಿದವರು.ನಾವು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಪಾಲಿಸಬೇಕು.ದೇಶದ ಆರ್ಥಿಕತೆಯ ಬೆಳವಣಿಗೆಗೆ ನಮ್ಮದಾದ ಕೊಡುಗೆಯನ್ನು ನೀಡಿ ಶಾಂತಿ ಸೌಹಾರ್ದತೆಯಿಂದ ಬಾಳಬೇಕು ಎಂದರು.

ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ಪುರುಷೋತ್ತಮ್ ಶೆಟ್ಟಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಸುಭಾಷ್ ಶ್ಚಂದ್ರ ಜೈನ್ ರವರು ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಜೀವನ ಚರಿತ್ರೆಯನ್ನು ಮೆಲುಕು ಹಾಕಿದರು.

ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್ ಸ್ವಾಗತಿಸಿ ನಿರೂಪಿಸಿದರು.ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾ ರಾವ್ ವಂದಿಸಿದರು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರೋವರ್ಸ್ ರೇಂಜರ್ಸ್ ವಿಭಾಗ ಸಹಭಾಗಿತ್ವ ವಹಿಸಿದ್ದವು.

p>

LEAVE A REPLY

Please enter your comment!
Please enter your name here