Site icon Suddi Belthangady

ಉಜಿರೆಯಲ್ಲಿ ದ.ಕ., ಉಡುಪಿ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಮತ್ತು ಕಬ್ಬಡಿ ಪಂದ್ಯಾಟ ಉದ್ಘಾಟನೆ

ಉಜಿರೆ:ಶ್ರೀ ಧ. ಮ.ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ.ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪೊಲಿಟೆನಿಕ್ ಪುರುಷರ ವಾಲಿಬಾಲ್ ಮತ್ತು ಕಬ್ಬಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.ಎಸ್.ಡಿ.ಎಂ.ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

Exit mobile version