ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ

0

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಎಂದು ಶಾಸಕ ಹರೀಶ್ ಪೂಂಜರವರು ಹೇಳಿದರು.

ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ 204 ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು ಮಂದಿಗೆ ಉದ್ಯೋಗ ದೊರೆಯಲಿದೆ. ಬೆಳ್ತಂಗಡಿಯ ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವಿ ಶಿಕ್ಷಣ, ಐಟಿಐ, ಡಿಪ್ಲೋಮಾ, ಎಂಜಿನಿಯರಿAಗ್ ಹಾಗೂ ಇನ್ನಿತರ ಪಧವೀದರರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರು ತಿಳಿಸಿದರು.ಈ ಸಂಧರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ವಿಶೇಷವಾಗಿ ಅಕ್ಟೋಬರ್ 6 ರಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಆಳ್ವಾಸ್ ನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಶ್ರಮಿಕ ಕಚೇರಿಯ ಬಳಿಯಿಂದ ಉಚಿತ ಬಸ್ ವ್ಯವಸ್ಥೆ ಇರುತ್ತದೆ.ಹೆಚ್ಚಿನ ಮಾಹಿತಿಗಾಗಿ ಶ್ರಮಿಕ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಮೊ:9901212207

LEAVE A REPLY

Please enter your comment!
Please enter your name here