Site icon Suddi Belthangady

ಮಾಲಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಬೃಹತ್ ಸ್ವಚ್ಛತಾ ಕಾರ್ಯ

ಮಾಲಾಡಿ: ಸ್ವಚ್ಛತಾ ಹೀ ಸೇವಾ” ಕಾರ್ಯಕ್ರಮದ ಅಂಗವಾಗಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜರಗಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು, ಪೊಮ್ಮಾಜೆ, ಹಾಗೂ ಊರ್ಲದಲ್ಲಿ ಏಕ ಕಾಲಕ್ಕೆ ಸ್ವಚ್ಛತೆಯನ್ನು ಸಾರ್ವಜನಿಕರು ಹಾಗೂ ಸ್ಥಳೀಯ ಮಾಲಾಡಿ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಏರ್ಪಡಿಸಲಾಯಿತು.
ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್, ಮಾಲಾಡಿ ಗ್ರಾಮದ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷ ಕೆ. ಸುಧಾಕರ ಆಳ್ವ, ಸೋಣಂದೂರು ಗ್ರಾಮದ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷ ಎಸ್.ಬೇಬಿ ಸುವರ್ಣ ಗ್ರಾ.ಪಂ. ಉಪಾಧ್ಯಕ್ಷ ಸೆಲೆಸ್ಟಿನ್ ಡಿ.ಸೋಜ, ಗ್ರಾ.ಪಂ.ಸದಸ್ಯರುಗಳು, ಪಂ.ಅ.ಅಧಿಕಾರಿ ಕೆ. ರಾಜಶೇಖರ ರೈ, ಕಾರ್ಯದರ್ಶಿ ಸಿಬ್ಬಂದಿ ವರ್ಗ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದ ತರಬೇತುದಾರರಾದ ವೀರೇಂದ್ರ ಕುಮಾರ್ ಹಾಗೂ ರವಿಚಂದ್ರ ಇವರು ಭಾಗವಹಿಸಿದ್ದರು.

Exit mobile version