ಉಜಿರೆ: ಛತ್ತಿಸ್ ಘಡ್ ನ ಚಂಪಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ 19 ರ ವಯೋಮಾನದ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿದೆ.
ನವಂಬರ್ ತಿಂಗಳಿನಲ್ಲಿ ಶಿವಮೊಗ್ಗದಲ್ಲಿ ನಡೆಯುವ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ತಂಡದ ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್ ಹಾಗೂ ಸಂದೀಪ್ ಶೆಟ್ಟಿ ಕಾರ್ಯ ನಿರ್ವಹಿಸಿರುತ್ತಾರೆ.