ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು.ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ವ್ಯಾಪಾರ ಮಳಿಗೆಗಳಿಗೆ ಹಾಗೂ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಅಂಗಡಿ ಮಳಿಗೆಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸಲಾಯಿತು.ಕೆಲವು ವ್ಯಾಪಾರ ಕೇಂದ್ರಗಳಿಂದ ಪ್ಲಾಸ್ಟಿಕ್ ಕವರ್ ವಶಪಡಿಸಲಾಯಿತು.ಸರಕಾರದ ಆದೇಶದಂತೆ NO GSR571(E) ರಂತೆ ಪ್ಲಾಸ್ಟಿಕ್ ನಿಷೇಧ ಹಾಗೂ ದಂಡನೆ ನಿಯಮದಂತೆ ಆಮದು, ಸಂಗ್ರಹನೆ,ವಿತರಣೆ,ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಪ್ಲಾಸ್ಟಿಕ್ ಅಂದರೆ 100 ಮೈಕ್ರೋನಿಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್, ಪಿಯುಸಿ ಬ್ಯಾನರ್ ಗಳು,ಪ್ಲಾಸ್ಟಿಕ್ ಸ್ಟಿಕರ್ ಗಳು, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಲೋಟಗಳು, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್ ಗಳು,ಪ್ಲಾಸ್ಟಿಕ್ ಐಸ್ ಕ್ರೀಮ್ ಸ್ಟಿಕ್ ಗಳು, ಅಲಂಕಾರಿಕಾಗಿ ಬಳಸುವ ಪಾಲಿಸ್ಟೇರಿಯನ್ ಥರ್ಮಕೋಲ್, ಬಲೂನ್ ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್ ಗಳು,ಇವುಗಳ ದಾಸ್ತಾನು ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡುವಂತೆ ಸೂಚನೆ ನೀಡಲಾಯಿತು.