Site icon Suddi Belthangady

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ.ಶಾಲೆಯಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆಕಾರ್ಯಕ್ರಮಕ್ಕೆ ಚಾಲನೆ

ಬೆಳಾಲು: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮದಡಿಯಲ್ಲಿ ಬೆಳಾಲಿನ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಂತೋಷ್ ಮಡಿವಾಳ ವಹಿಸಿದ್ದರು.ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬದುಕ ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಬೆಳಾಲು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಸತೀಶ್ ಗೌಡ ಎಳ್ಳುಗದ್ದೆ, ಪೆರಿಯಡ್ಕ ಚಿತ್ತಾರ ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ರಾಜೇಶ್, ಮುಖ್ಯೋಪಾಧ್ಯಾಯಿನಿ ವಿಜಯ, ಜ್ಞಾನ ದೀಪ ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಹಶಿಕ್ಷಕಿ ಜಯಶ್ರೀ.ಬಿ.ಕೆ. ಕಾರ್ಯಕ್ರಮ ನಿರೂಪಿಸಿದರು

Exit mobile version