Site icon Suddi Belthangady

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನಲ್ಲಿ ರಸ್ತೆ ಅಪಘಾತ ಸಂದರ್ಭದಲ್ಲಿನ ಕಾನೂನಿನ ವಿವರಗಳು ವಿಷಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಅ.7ರಂದು ರಸ್ತೆ ಅಪಘಾತ ಸಂದರ್ಭದಲ್ಲಿನ ಕಾನೂನಿನ ವಿವರಗಳು ಎಂಬ ವಿಷಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲ್ಪಟ್ಟಿತು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಾದ ಧನಂಜಯ್ ರಾವ್, ಬೆಳ್ತಂಗಡಿ ರವರು ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉzಶಿಸಿ ಮಾತನಾಡುತ್ತಾ, ರಸ್ತೆ ಅಪಘಾತ ಸಂದರ್ಭದಲ್ಲಿ ಜವಾಬ್ದಾರಿಯುತ ನಾಗರೀಕರಾಗಿ ನಾವು ಮೊತ್ತ ಮೊದಲು ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಬೇಕು.

ವಾಹನ ಚಾಲನೆಯ ಸಂದರ್ಭದಲ್ಲಿ ಚಾಲಕನ ಬಳಿ ಇರಬೇಕಾದ ಮೂಲ ದಾಖಲೆಗಳು, ಸುರಕ್ಷತೆಯ ಚಾಲನೆ, ಅಪಘಾತ ಸಂದರ್ಭ ಹಾಗೂ ಅನಂತರ ನಡೆಯುವ ಕಾನೂನು ಪ್ರಕ್ರಿಯೆಗಳನ್ನು ಸರಳವಾಗಿ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಘಟಕದ ವಿದ್ಯಾರ್ಥಿ ಮುಖಂಡರಾದ ಕು. ಸಹನಾ ಸ್ವಾಗತಿಸಿ, ಅನೋಶ್ ಟೈಟಸ್ ವಂದಿಸಿದರು.

Exit mobile version