ನಿಡ್ಲೆ: ಸ.ಪ್ರೌ.ಶಾಲೆಯಲ್ಲಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

0

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ಇಲ್ಲಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಅ.7ರಂದು ನಡೆಯಿತು.ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ವಿಚಾರವಾಗಿ ನಿಡ್ಲೆ ಸಮುದಾಯ ಕೇಂದ್ರದ ವಿನುತಾ ಇವರು ವಿವರವಾದ ಮಾಹಿತಿ ನೀಡಿದರು.ಮಕ್ಕಳ ಸುರಕ್ಷತೆ ಮತ್ತು ಕಾನೂನು ಮಾಹಿತಿಯನ್ನು ಧರ್ಮಸ್ಥಳ ಠಾಣೆಯ ರೇಣುಕಾ ಇವರು ಉದಾಹರಣೆ ಮೂಲಕ ತಿಳಿಸಿದರು.

ಪೋಷಕರೊಂದಿಗೆ ಮಕ್ಕಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ರಜಾ ಅವಧಿಯಲ್ಲಿ ಮಕ್ಕಳು ಮಾಡಬೇಕಾದ ಕೆಲಸವನ್ನು ಪೋಷಕರಿಗೆ ತಿಳಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ ಗೌಡ, ಉಪಾಧ್ಯಕ್ಷೆ ವನಿತಾ, ಇತರ ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರಾದ ಶಾಂತಾ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುಚಿತ್ರ ರವರು ಸ್ವಾಗತಿಸಿ, ನಿರ್ವಹಿಸಿದರು.ಶರತ್ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here