


ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ ಅನುಮತಿ ಇಲ್ಲದೆ ನಡೆಸುತ್ತಿರುವ ವಸತಿಗೃಹ ವ್ಯವಹಾರವನ್ನು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 68ರ ಮೇರೆಗೆ ಕಾನೂನು ಬಾಹಿರ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಯಿತು.


ಅನಧಿಕೃತವಾಗಿ ನಡೆಸುತ್ತಿರುವ ಇತರರಿಗೆ ಎಚ್ಚರಿಕೆ ನೀಡಿದಂತಾಗಿದೆ.








