ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2022-23ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರವು ಅ.5 ರಂದು ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಶಾಸಕ ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಕೆ.ವಸಂತ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಬದನಾಜೆ ಸರಕಾರಿ ಪ್ರೌಢ ಶಾಲೆಯ ಬದನಾಜೆ ಇದರ ಮುಖ್ಯಶಿಕ್ಷಕಿ ಜಮುನಾ ಕೆ.ಎಸ್., ಎಸ್ ಡಿಎಂಸಿ ಕಾರ್ಯಧ್ಯಕ್ಷ ಸೀತಾರಾಮ್, ಬದನಾಜೆ ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅನಿಲ್ ಡಿಸೋಜಾ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಇಲಿಯಸ್ ಬಿ.ಎಂ, ಬದನಾಜೆ ಸ.ಹಿ.ಪ್ರಾ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುಕೇಶ್ ಕುಮಾರ್, ಊರಿನ ಹಿರಿಯರಾದ ಗೋಪಾಲಕೃಷ್ಣ ಉಪಾದ್ಯಾಯ, ನಿವೃತ್ತ ಮುಖ್ಯ ಶಿಕ್ಷಕ ಬಾಬು ಮಾಸ್ಟರ್, ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಉಪಸಿತರಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಬಿ.ಎ.ಶಮಿವುಲ್ಲಾ ಸ್ವಾಗತಿಸಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಮನುಜ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.ಸಹ ಶಿಬಿರ ಅಧಿಕಾರಿ ಕು.ಬಬಿತಾ ರೈ ವಂದಿಸಿದರು.