ಬೆಳ್ತಂಗಡಿ: ಬೆಳ್ತಂಗಡಿ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣಕ್ಕೆ ರೂಪಾಯಿ 10 ಕೋಟಿ ಅನುದಾನ ಒದಗಿಸುವಂತೆ ಹಾಗೂ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ತುಂಬಾ ಹಳೆಯ ಕಟ್ಟಡವಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದುದರಿಂದ ನೂತನ ಕಟ್ಟಡ ನಿರ್ಮಾಣ ಮಾಡಲು ರೂಪಾಯಿ 10 ಕೋಟಿ ಅನುದಾನ ಮಂಜೂರು ಮಾಡಬೇಕೆಂದು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಚಿವರು ಸ್ಪಂದಿಸಿ ನಾರಾವಿಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರೀಯಾ ಯೋಜನೆ ಸಿದ್ದಪಡಿಸಿ ಕ್ರಮ ಕೈಗೊಳ್ಳುವಂತೆ ಮತ್ತು ಬೆಳ್ತಂಗಡಿ ಆರೋಗ್ಯ ಕೇಂದ್ರದ ವೈದ್ಯರ ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.