ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಶ್ರೀ ಧರ್ಮಸ್ಥಳ ಶಾಲೆಗಳ ಸಹಯೋಗದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟು ಗ್ರಾಮದ ಕೃಷಿಕ ರೈತ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಅ.13 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಅಟಲ್ ಜೀ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ವಹಿಸಿದ್ದರು.ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ.ಉದ್ಘಾಟಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಜಿಲ್ಲಾ ಮುಖ್ಯ ಸಂಯೋಜನಕ ಎಲ್.ಎನ್.ಸುರೇಶ ಎಂ.ಎಸ್ ಮಾಹಿತಿ ನೀಡಿದರು.ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅಭಿವೃದ್ಧಿ ಅಧಿಕಾರಿ ಉಮೇಶ ಕೆ., ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್, ನಿರ್ದೇಶಕಿ ಧನಲಕ್ಷ್ಮೀ ಜನಾರ್ಧನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ, ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಪದ್ಮಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರಿಮಳ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ 153 ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.