ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸೃಜನಶೀಲ ವ್ಯಕ್ತಿತ್ವವನ್ನು ರೂಪಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಶೆಟ್ಟಿ ಹೇಳಿದರು.
ಅವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಡಿಲ್ನಾಳ ಇಲ್ಲಿ ಜರುಗಿದ ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಜಾಗೃತಿಯನ್ನು ಹೊಂದಿ ದೇಶದ ಬೆಳವಣಿಗೆಗೆ ಪೂರಕವಾದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು.ಗಾಂಧೀಜಿಯವರಂತಹ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸುತ್ತಾ, ಸ್ವಚ್ಛ ಪರಿಸರದ ನಿರ್ಮಾಣದಲ್ಲಿ ತೊಡಗಿಕೊಂಡು ಭವಿಷ್ಯದ ಭವ್ಯ ಭಾರತದ ರೂವಾರಿಗಳಾಗಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ .ಪಿ ಅಧ್ಯಕ್ಷತೆ ವಹಿಸಿದ್ದರು.ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಜಯಾನಂದ ಗೌಡ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ.ಯಂ.ಶೆಟ್ಟಿ, ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಇಡ್ಯಾ, ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಕೋರಿಯಾರು, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷರಾದ ಶಾಂತ .ಜಿ. ಬಂಗೇರಾ, ಓಡಿಲ್ನಾಳ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶಮಿಮಾ ಪಾದೆ, ಶಾಲಾ ದೈಹಿಕ ನಿರ್ದೇಶಕರಾದ ನಿರಂಜನ್, ವಾಣಿ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್. ಬಿ ಉಪಸಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್.ಯಂ ಸ್ವಾಗತಿಸಿದರು.ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಪ್ರಸ್ತಾವನೆಗೈದರು.ಎನ್ಎಸ್ಎಸ್ ಸಹ ಕಾರ್ಯಕ್ರಮಾಧಿಕಾರಿ ಕು.ಕಾಮಾಕ್ಷಿ ವಂದಿಸಿದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.