ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ಕೃಷಿಕರನ್ನು ಸಂಘಟಿಸಿ, ತರಬೇತಿಗಳನ್ನು ನೀಡುತ್ತಿದ್ದು ಯಂತ್ರ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಯೋಜನೆಯು ಸರಕಾರದ ಜೊತೆ ಸೇರಿ ಕೃಷಿ ಯಂತ್ರಧಾರಾ ಕಾರ್ಯಕ್ರಮವನ್ನು ಅನುಷ್ಠಾನಿಸುವುದರ ಜೊತೆಗೆ ಆಸಕ್ತ ರೈತರಿಗೆ ಅನುದಾನಾಧಾರಿತ ಕೃಷಿ ಉಪಕರಣಗಳ ಖರೀದಿ, ಮತ್ತಿತರ ಉದ್ಯೋಗಗಳಿಗೆ ಅವಕಾಶ ಮಾಡಿಕೊಡುತ್ತಿದೆ.
ಈ ಬೃಹತ್ ಕಾರ್ಯಕ್ರಮಕ್ಕೆ ಅ.14 ರಂದು ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ಕರ್ನಾಟಕ ಸರಕಾರದ ಕೃಷಿ ಸಚಿವ ಚೆಲುವರಾಯಸ್ವಾಮಿ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ವಾರ್ಷಿಕ ಸಸಿ ವಿತರಣೆಗೆ ಚಾಲನೆ ನೀಡಿದರು.ಮಾತೃಶ್ರೀ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ ಕೃಷಿ ಕಾರ್ಯಕ್ರಮಗಳ ವಾರ್ಷಿಕ ವರದಿ ಬಿಡುಗಡೆ ಮಾಡಿದರು.ಶ್ರೀ ಡಿ. ಹರ್ಷೇಂದ್ರ ಕುಮಾರ್ ಕೃಷಿ ವಿಸ್ತರಣಾ ಕಾರ್ಯಕ್ರಮಗಳ ಮಾಹಿತಿ ಪತ್ರ ಬಿಡುಗಡೆ ಮಾಡಿದರು.ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿ ಇಲಾಖಾ ಅಧಿಕಾರಿಗಳ ಉಪಸ್ಥ್ಥಿತಿಯಲ್ಲಿ ಚಾಲನೆ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್.ಎಚ್. ಮಂಜುನಾಥ್ ಸ್ವಾಗತಿಸಿ ಆಶಯ ಭಾಷಣಗೈದರು. ಸಚಿವರ ಪತ್ನಿ ಧನಲಕ್ಷ್ಮೀ ಚೆಲುವರಾಯ ಸ್ವಾಮಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕ ಡಾ.ಹೆಚ್.ಕೆಂಪೇ ಗೌಡ, ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ, ಮುಖ್ಯ ಕಾರ್ಯನಿರ್ಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೆಜಸ್, ಒಕ್ಕೂಟದ ಪದಾಧಿಕಾರಿಗಳು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಕಾರ್ಯಕರ್ತರು ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು.
ಬೆಳ್ತಂಗಡಿ ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿ, ಯೋಜನಾಧಿಕಾರಿ ಸುರೇಂದ್ರ ವಂದಿಸಿದರು.