Site icon Suddi Belthangady

ಬೆಳಾಲು: ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ಎಸ್. ಡಿ.ಎಂ.ಪಾಲಿಟಿಕ್ನಿಕ್ ನ ರಾಷ್ಟ್ರೀಯ ಸೇವಾ ವಾರ್ಷಿಕ ಶಿಬಿರದ ಉದ್ಘಾಟನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಅನುದಾನಿತ ಪ್ರೌಢ ಶಾಲೆ, ಶಾಲಾಭಿವೃದ್ಧಿ ಸಮಿತಿ, ಊರವರ ಸಹಕಾರದೊಂದಿಗೆ, ಉಜಿರೆ ಶ್ರೀ ಧ. ಮ. ಪಾಲಿಟೆಕ್ನಿಕ್, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರಕಾರ ಹಾಗೂ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಅ.15 ರಿಂದ ಅ.21ರವರೆಗೆ ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ನಡೆಯಲಿದೆ. ಅ.15 ರಂದು ಶಿಬಿರದ ಉದ್ಘಾಟನೆಗೊಂಡಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ , ಎನ್ ಎಸ್.ಎಸ್ ತಾಂತ್ರಿಕ ಶಿಕ್ಷಣ ಇಲಾಖೆಯ ಸಂಯೋಜನಾಧಿಕಾರಿ ಗುರುಪ್ರಸಾದ್ ಹೂಗಾರ್, ಬೆಳಾಲು ಶ್ರೀ ಸರಸ್ವತಿ ಅನುದಾನಿತ ಹಿ. ಪ್ರಾ. ಶಾಲಾ ಸಂಚಾಲಕ ರಾಜರಾಮ ಶರ್ಮ ಕೊಲ್ಪಾಡಿ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಬಾಯಿ ಎಚ್., ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಪಾಲಿಟಿಕ್ನಿಕ್ ಪ್ರಾಂಶುಪಾಲ ಸಂತೋಷ್ ವಹಿಸಿದ್ದರು.

ಯೋಜನಾಧಿಕಾರಿಗಳಾದ ಪ್ರಕಾಶ್ ಗೌಡ, ಪುಷ್ಪಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಂಯೋಜನಾಧಿಕಾರಿ ಡಾ. ಗುರುಪ್ರಸಾದ್ ಹೂಗಾರ್ ಇವರನ್ನು ಗೌರವಿಸಲಾಯಿತು.

Exit mobile version