ಬೆಳ್ತಂಗಡಿ: ಅ.18ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

0

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಅ.18 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್‌ ನಿರೀಕ್ಷಕರು ಅ.18ರಂದು ಬೆಳ್ತಂಗಡಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್‌ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ. ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

LEAVE A REPLY

Please enter your comment!
Please enter your name here