ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.ಅ.18ರಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ನವರಾತ್ರಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8.00ಕ್ಕೆ ನಿತ್ಯ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 7.00ರಿಂದ ವಿವಿಧ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here