Site icon Suddi Belthangady

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

ಮುಂಡಾಜೆ: ಅ.20 ಶುಕ್ರವಾರ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಮುಂಡಾಜೆ ಅನುದಾನಿತ ಪ್ರೌಢ ಶಾಲೆಗೆ ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾ ನಗರ, ಸಂಘ-ಸಂಸ್ಥೆ ಹಾಗೂ ದಾನಿಗಳ ಸಹಕಾರದಲ್ಲಿ ನಿರ್ಮಾಣಗೊಳ್ಳಲಿರುವ ಶಾಲೆಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆಯನ್ನು ಡಾ.ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಎಂ.ಎಲ್.ಸಿ ಪ್ರತಾಪ ಸಿಂಹ ನಾಯಕ್, ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ, ಸಹಾಯಕ ಗವರ್ನರ್ ಡಾ.ರಮೇಶ್, ವಲಯ ಸೇನಾನಿ ಯಶವಂತ ಪಟವರ್ಧನ್, ಮಾಜಿ ಅಧ್ಯಕ್ಷೆ ಮನೋರಮ್ ಭಟ್, ಮಾಜಿ ಕಾರ್ಯದರ್ಶಿ ರಕ್ಷಾ ರಾಗ್ನೇಶ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಮುಂಡಾಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ, ಸಂಚಾಲಕ ನಾರಾಯಣ ಗೌಡ, ಶಾಲಾ ವಿಭಾಗಗಳ ಮುಖ್ಯಸ್ಥರಾದ ಜಾಲಿ ಡಿಸೋಜಾ, ಜಯಂತಿ, ಚಂದ್ರಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ವರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಮಚ್ಚಿಮಲೆ ಅನಂತ ಭಟ್ ಸ್ವಾಗತಿಸಿದರು.ಉಪನ್ಯಾಸಕ ಡಾ.ರವಿ ಮಂಡ್ಯ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಫಡಕೆ ವಂದಿಸಿದರು.

Exit mobile version