ಶಿಬಾಜೆ: ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ

0

ಶಿಬಾಜೆ: ಶಿಬಾಜೆ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬಹಳ ವಿಜೃಂಭಣೆಯಿಂದ ನವರಾತ್ರಿ ಉತ್ಸವ,ಪೂಜೆ ನಡೆಯುತ್ತಿದೆ.

ಶ್ರೀ ದೇವಿಗೆ ವಿಶೇಷ ಪೂಜೆ ಪ್ರತಿ ದಿನ ರಾತ್ರಿ ರಂಗಪೂಜೆ,ಹೂವಿನ ಪೂಜೆ,ಇನ್ನಿತರ ಪೂಜೆಗಳು ನಡೆಯುತ್ತಿದೆ.ಪ್ರತಿದಿನ ವಿವಿಧ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, ಊರ ಪರವೂರ ಭಕ್ತರು ದಿನಂಪ್ರತಿ ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ಭಕ್ತಾಧಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿ ಭೋಜನ ವ್ಯವಸ್ಥೆಯಿದ್ದು ಆಡಳಿತ ಮಂಡಳಿ ಉತ್ತಮ ರೀತಿಯಲ್ಲಿ ವ್ಯವಸ್ಥೆ ಮಾಡಿದ್ದು, ಸಾವಿರಾರು ಭಕ್ತಾದಿಗಳು ಭೋಜನ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here