ಪಡಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ದಿ.25ರಂದು ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ವಸಂತ ಪೂಜಾರಿ ಗ್ರಾಮಸ್ಥರಿಗೆ ಕರಪತ್ರ ಹಂಚುವುದರ ಮೂಲಕ ಚಾಲನೆ ನೀಡಿದರು.
ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಸಂತಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಫಾನ, ಸಂಜೀವಿನಿ ಮಹಿಳಾ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ, ವಲಯ ಮೇಲ್ವಿಚಾರಕರಾದ ಜಯಾನಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು ಸುಮನಾ, ತಾಲೂಕು ಆರ್ಥಿಕ ಸಲಹೆಗಾರರಾದ ಉಷಾ, ಇಂಡಸ್ ವಿವಾ ವೆಲ್ ನೆಸ್ ಅಡ್ವೈಸರ್ ಅನ್ನಸ್ಪೀಡಲ್ ಡಿ ಸೋಜ, ಸಮುದಾಯ ಆರೋಗ್ಯ ಅಧಿಕಾರಿ ಕು.ಸಂಧ್ಯಾ, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು, ಎಸ್.ಡಿ.ಎಮ್ ಸಮಾಜ ಕಾರ್ಯ ಸ್ನಾತ್ತಕೋತ್ತರ ವಿಭಾಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.