ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಸಹಯೋಗದಲ್ಲಿ ನೀರಚೆಲುಮೆ ಸಿದ್ದವನ ನರ್ಸರಿಯಲ್ಲಿ ಅ.26ರಂದು ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಗಾರ ನಡೆಯಿತು.
ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಗತಿಪರ ಕೃಷಿಕ ಹರೀಶ್ ರಾವ್ ಎಂ. ಉದ್ಘಾಟಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್. ಹೆಚ್. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳ ಕೃಷಿ ವಿಭಾಗದ ಮೆನೇಜರ್ ಬಿ. ಬಾಲಕೃಷ್ಣ ಪೂಜಾರಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ನಿರ್ದೇಶಕ ಕೆ. ಎಸ್. ಚಂದ್ರಶೇಖರ, ಪ್ರಗತಿಪರ ಅಣಬೆ ಕೃಷಿಕರಾದ ಮಧುರಾ ಬೆಳಾಲು, ಪ್ರಗತಿಪರ ಜೇನು ಕೃಷಿಕ ಬಾಬು ಎಂ. ಕೆ. ಧರ್ಮಸ್ಥಳ ಸಂಪಲ್ಮನಾ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ನರ್ಸರಿ ಯೋಜನಾಧಿಕಾರಿ ದಯಾನಂದ ಗೌಡ, ರೈತರು ಹಾಜರಿದ್ದರು.ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಯೋಜನಾಧಿಕಾರಿ ಸುಧೀರ್ ಜೈನ್ ಸ್ವಾಗತಿಸಿ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿ, ಯೋಜನಾಧಿಕಾರಿ ಸುರೇಂದ್ರ ವಂದಿಸಿದರು.