ಉಜಿರೆ: ಉಜಿರೆ ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ 15ನೇ ಹಣಕಾಸು ಯೋಜನೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಮತ್ತು ಪರಿಶೋಧನಾ ಗ್ರಾಮ ಸಭೆ ಅ.31ರಂದು ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಎ.ಕೆ.ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ರತ್ನಾವತಿ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕಿ ಜಯಲಕ್ಷ್ಮಿ, ನರೇಗಾ ಯೋಜನೆಯ ತಾಂತ್ರಿಕ ನಿತಿನ್, ಪೂರ್ಣಿಮಾ, ತಾಲೂಕು ಐಇಸಿ ಸಂಯೋಜಕಿ ವಿನಿಷಾ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಸಿಬ್ಬಂದಿಗಳು ಹಾಜರಿದ್ದರು.
ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.