Site icon Suddi Belthangady

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ತಹಸೀಲ್ದಾರ್ ಟಿ.ಸುರೇಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಉಜಿರೆ ಶ್ರೀ ಧ.ಮ.ಕಾಲೇಜು ಕನ್ನಡ ವಿಭಾಗದ ಉಪನ್ಯಾಸಕ ಹಳೆಮನೆ ರಾಜಶೇಖರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಕನ್ನಡ ನಾಡು ಸಂಸ್ಕೃತಿ, ಆಚರಣೆ ಬಗ್ಗೆ ಮಾತನಾಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾದರ್ ಸ್ವಾಗತಿಸಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಹಿಂದುಳಿದ ವರ್ಗ ಇಲಾಖೆಯ ಸಹಾಯಕ ನಿರ್ದೇಶಕ ಜೋಸೆಫ್, ತೋಟಗರಿಕಾ ಇಲಾಖೆಯ ಸಹಾಯ ನಿರ್ದೇಶಕ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಟಿ., ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲ ಅಭಿಯಂತರರು ಅಜಿತಾ, ಸರ್ವೆ ಇಲಾಖೆಯ ಎಡಿ ಎಲ್ ಆರ್ ರಾಜೇಶ್ ನಾಯ್ಕ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಗೃಹ ರಕ್ಷಕ ಇಲಾಖೆಯ ಘಟಕಾಧಿಕಾರಿ ಜಯಾನಂದ ಲಾಯಿಲ, ಇತರ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿಯ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆ, ವಾಣಿ ಆಂಗ್ಲ ಮಾಧ್ಯಮ ಶಾಲೆ, ಸರಕಾರಿ ಪ್ರೌಢ ಶಾಲೆ, ಸಂತ ತೆರೆಸಾ ಪ್ರೌಢ ಶಾಲೆ, ಹೋಲಿ ರಡಿಮರ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ಕನ್ನಡ ಸಂಸ್ಕೃತಿ ಕುರಿತು ನೃತ್ಯ, ಹಾಡು ನೆರವೇರಿತು.

Exit mobile version