ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇಲಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅತಿಥಿಗಳಾಗಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್, ಸಿವಿಲ್ ಇಂಜಿನಿಯರ್ ವಿಜಯ ವಿಷ್ಣು ಮಯ್ಯ, ಕಾಂತಾರ ಖ್ಯಾತಿಯ ನಟ ದೀಪಕ್ ರೈ ಪಾಣಾಜೆ, ಸ್ಥಳೀಯ ಸಿವಿಲ್ ಇಂಜಿನಿಯರ್ ಜಗದೀಶ್ ಪ್ರಸಾದ್ ಉಪಸ್ಥಿತರಿದ್ದರು.
ಸಿವಿಲ್ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಇಂಜಿನಿಯರಿಂಗ್ ಗಳಿಗೆ ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು.
ಕಾಂತಾರ ಖ್ಯಾತಿಯ ನಟ ದೀಪಕ್ ರೈ ಪಾಣಾಜೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್ ಮಾತನಾಡಿ ದೇಶದ ಅಭಿವೃದ್ಧಿಗೆ ಸಿವಿಲ್ ಇಂಜಿನಿಯರ್ ಕ್ಷೇತ್ರದ ಮಹತ್ವವನ್ನು ತಿಳಿಸಿಕೊಟ್ಟರು.
ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಇವರು ವಹಿಸಿದ್ದರು.ಉಪನ್ಯಾಸಕರಾದ ಸಂಪತ್ ಇವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.ವಿಭಾಗ ಮುಖ್ಯಸ್ಥೆ ತೃಪ್ತಿ.ಆರ್ ರೈ ವಂದಿಸಿದರು.
ಗೃಹ ಟೆಕ್ನಿಕಲ್ ಎಕ್ಸ್ಪೋದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ ವಿವಿಧ ತಾಂತ್ರಿಕ ಮಾದರಿಗಳು ಮತ್ತು ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ವಿವಿಧ ವಸ್ತುಗಳನ್ನು ಪ್ರದರ್ಶಿಸಲಾಯಿತು.ಸ್ಥಳೀಯ ಸುಮಾರು 1500ಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.