ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಅಯೂಬ್ ಮಾತನಾಡಿ ಕನ್ನಡದ ಹಿರಿಮೆಯು ನಮ್ಮೆಲ್ಲರ ಹೆಮ್ಮೆ.
ಕನ್ನಡ ನಾಡಿನಲ್ಲಿ ಹುಟ್ಟಿದ ನಾವೇ ಧನ್ಯರು ಎಂದು ಕನ್ನಡ ನಾಡನ್ನು ಕೊಂಡಾಡಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಶಾಲಾ ಮುಖ್ಯಉಪಾಧ್ಯಾಯಿನಿ ಜಾಕಿನ್ ಬಿನ್ ಅವರು ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ತಿಳಿಸಿ ಯಾವುದೇ ಭಾಷೆಯಾಗಲಿ ನಾವು ಅದನ್ನು ಇಷ್ಟಪಟ್ಟು ಕಲಿತರೆ ಅದು ನಮಗೆ ಶುದ್ಧವಾಗಿ ಬರುವುದು ಹಾಗೂ ಕನ್ನಡ ನಾಡಿನ ಹಿರಿಮೆಯನ್ನು ಬೆಳೆಸುವ ಕನ್ನಡ ಪ್ರಜೆಗಳಾಗಿ ಬಾಳಬೇಕು ಎಂದರು.
ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಶ್ರೀಯುತ ಸಯ್ಯದ್ ಇರ್ಫಾನ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಸಹಶಿಕ್ಷಕಿ ಶ್ರೀಮತಿ ಕ್ರಿಶಲಾ ಅತಿಥಿಗಳನ್ನು ಸ್ವಾಗತಿಸಿ, ಶಾಲೆಯ ಕನ್ನಡ ವಿಷಯದ ಶಿಕ್ಷಕಿ ಪ್ರಮೀಳಾ ಶೆಟ್ಟಿ ನಿರೂಪಿಸಿದರು.
ಸಹಶಿಕ್ಷಕಿ ಕುಮಾರಿ ನಸೀಮಬಾನು ಧನ್ಯವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.