ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

0

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಶಾಲಾ ಕನ್ನಡ ರಾಜ್ಯೋತ್ಸವವೂ ಧ್ವಜಾರೋಹಣದಿಂದ ಪ್ರಾರಂಭಗೊಂಡಿತು.

ಹಿರಿಯ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಧ್ವಜಾರೋಹಣ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆಎಚ್ ವಿದ್ಯಾರ್ಥಿಗಳಿಗೆ ಕನ್ನಡದ ಮಹತ್ವವನ್ನು ತಿಳಿಸಿದರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಕನ್ನಡ ಮಾತೃಭಾಷೆ ಆಗಿರುವುದರಿಂದ ಕನ್ನಡ ಭಾಷೆಯನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಗೌತಮಿ ಈ ದಿನದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ದೀಕ್ಷ ಕುಲಾಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ರಾವ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ವಿನಯ್ ನಿರೂಪಿಸಿ, ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಸ್ವಾಗತಿಸಿ , ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದ ಅರ್ಪಿಸಿದರು. ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಿಹಿ ತಿಂಡಿಯನ್ನು ಹಂಚಲಾಯಿತು.

LEAVE A REPLY

Please enter your comment!
Please enter your name here