ಬೆಳ್ತಂಗಡಿ: ಭಾಷೆಯ ಮೂಲಕ ಸಾಮಾಜಿಕ, ಸಾಂಸ್ಕೃತಿಕ, ಭಾವಾನಾತ್ಮಕ ಬಾಂಧವ್ಯಗಳು ಬೆಳೆಯಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಡಾ.ಅಭಯ ಕುಮಾರ್ ಹೇಳಿದರು.
ಅವರು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜು ಮತ್ತು ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ ಜರುಗಿದ ಕರ್ನಾಟಕ ಐವತ್ತು ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡುತ್ತಾ, ಕನ್ನಡ ಭಾಷೆಯ ಪ್ರಾಚೀನತೆಯ ಒಂದನೇ ಶತಮಾನದಿಂದಲೇ ಕಂಡು ಬರುತ್ತದೆ.
ಕನ್ನಡ ಭಾಷೆಯ ಸಮೃದ್ಧವಾದ ಭಾಷೆಯಗಿದ್ದು, ಅನೇಕ ಪ್ರಕಾರದ ಸಾಹಿತ್ಯಗಳು ರಚನೆಗೊಂಡು ವಿಶ್ವ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಭಾಷೆಯ ಬೆಳವಣಿಗೆ ಹಾಗೂ ಉಳಿವಿಗಾಗಿ ಅನೇಕ ಚಳುವಳಿಗಳು ನಡೆದಿವೆ.ನಾಡು ನುಡಿಯ ಮೂಲಕ ಸ್ವಾತಂತ್ರ್ಯ ಚಳುವಳಿಗೂ ನಡೆದಿವೆ. ಸಾಹಿತ್ಯವೆನ್ನುವುದು ಆಯ ಕಾಲ ಘಟ್ಟದ ಅವಶ್ಯಕತೆಗನುಗುಣವಾಗಿ ರಚನೆಗೊಂಡಿರುತ್ತದೆ. ಜನರಲ್ಲಿ ನಮ್ಮದೆನ್ನುವ ಆಸ್ಮಿತೆಯನ್ನು ಸಾಹಿತ್ಯ ತಂದುಕೊಟ್ಟಿದೆ.
ಪ್ರಾದೇಶಿಕ ಭಾಷೆಯ ಮೂಲಕವೇ ಉನ್ನತವಾದ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ. ಜೀವನ, ಅನ್ನ, ಗೌರವಕೊಟ್ಟ ನಮ್ಮ ನಾಡಿನ ಭಾಷೆಯನ್ನು ನಾವು ಗೌರವಿಸಿ ಬೆಳೆಸಬೇಕು ಎಂದರು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ. ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಕಾಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಪ್ರಧಾನ ಕಾಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸ್ಥಿತರಿದ್ದರ
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾಯದರ್ಶಿಗಳಾದ ಬೆಳಾಲು ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್.ಎಂ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಮಹಾಬಲ ಗೌಡ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಮೀನಾಕ್ಷಿ ಕಾಯಕ್ರಮ ನಿರೂಪಿಸಿದರು.