ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನಾಯಕತ್ವ ತರಬೇತಿ ಶಿಬಿರ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ.ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೆಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ನಾಯಕತ್ವ ತರಬೇತಿ ಶಿಬಿರವು ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಸಭಾಂಗದಲ್ಲಿ ಜರಗಿತು.

ಈ ತರಬೇತಿ ಶಿಬಿರವನ್ನು ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಭಗೀರಥ ರವರು ಉದ್ಘಾಟಿಸಿ, ಸಹಕಾರ ಸಂಘಗಳು ಬೆಳೆಯಬೇಕಾದರೆ, ಅಲ್ಲಿನ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರಿಗೆ ಪೂರಕ ಮಾಹಿತಿ ಅಗತ್ಯ, ಇದನ್ನು ಜಿಲ್ಲಾ ಸಹಕಾರಿ ಯೂನಿಯನ್ ಮಾಡುತ್ತಿದೆ ಇನ್ನು ಇಂತಹ ತರಬೇತಿ ಮಾಡುವಂತೆ ಸಲಹೆ ನೀಡಿದರು

ಅಧ್ಯಕ್ಷತೆಯನ್ನು ವಹಿಸಿದ ದ.ಕ.ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ, ಸಹಕಾರ ಸಂಸ್ಥೆಗಳು ಗ್ರಾಮೀಣ ಭಾಗದ ಜನರಿಗೆ ಪೂರಕವಾಗಿದೆ, ಸಹಕಾರ ಸಂಸ್ಥೆಗಳಲ್ಲಿ ಉತ್ತಮ ಸೇವೆ, ಆಡಳಿತ ನಡೆಸಲು ಅವರಿಗೆ ಕಾನೂನು, ಕಾಯ್ದೆಗಳ ಅರಿವು ಅಗತ್ಯ, ಈ ತರಬೇತಿ ಕಾರ್ಯಗಾರದಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಲು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ತ್ರಿವೇಣಿ ರಾವ್ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ಉಪವಿಭಾಗ ಇವರು ಆಡಳಿತ ಮಂಡಳಿ ಸದಸ್ಯರ ಜವಬ್ದಾರಿ, ಕರ್ತವ್ಯಗಳ ಬಗ್ಗೆ ಮತ್ತು ಧರಣೇಂದ್ರ ಜೈನ್, ಉಪನ್ಯಾಸಕರು ಕರ್ನಾಟಕ ಪಬ್ಲಿಕ್ ಸ್ಕೂಲ್, ಇವರು ಸಹಕಾರ ಸಂಸ್ಥೆಗಳಲ್ಲಿ ನಾಯಕತ್ವ ಮತ್ತು ಸೇವೆ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್.ಉಪಸ್ಥಿತರಿದ್ದರು.ಸಾವಿತ್ರಿ ರೈ ನಿರ್ದೇಶಕರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಇವರು ಸ್ವಾಗತಿಸಿ, ಎಸ್.ವಿ.ಹಿರೇಮಠ್ ಮುಖ್ಯಕಾರ್ಯನಿರ್ವಹಣಾಧಿಕಾರಿ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here