

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ 2023 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಗೊಂಡ ಶ್ರೀ ಧ.ಮ.ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಮತ್ತು ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್.ಮಂಜುನಾಥ್, ದೀಪಿಕಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನೆಯ ಮತ್ತು ಧರ್ಮಸ್ಥಳ ಕ್ಷೇತ್ರದ ಮುಖ್ಯಸ್ಥರು, ಸಿಬ್ಬಂದಿಗಳು, ನ್ಯೂರೋಪತಿ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಯೋಜನಾಧಿಕಾರಿ ದಯಾನಂದ ಸ್ವಾಗತಿಸಿ, ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ವಂದಿಸಿದರು.